Advertisement
MIRROR FOCUS

ಯಾಸ್‌ ಚಂಡಮಾರುತದ ಮುನ್ನವೇ ರಾಜ್ಯದಲ್ಲಿ ಮಳೆಯ ಮುನ್ನೆಚ್ಚರಿಕೆ | ಹಲವು ಜಿಲ್ಲೆಗಳಲ್ಲಿ YELLOW Alert |

Share

ಟೌಕ್ಟೇ ಚಂಡಮಾರುತದ ಬಳಿಕ ಯಾಸ್‌ ಚಂಡಮಾರುತವು ಬಂಗಾಳಕೊಲ್ಲಿಯಲ್ಲಿ  ಬಲಗೊಳ್ಳುತ್ತಿದೆ. ಮೇ.24  ರ ನಂತರ ತಮಿಳುನಾಡು, ಒರಿಸ್ಸಾದಲ್ಲಿ  ಮಳೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮುನ್ನವೇ ಕರ್ನಾಟಕದ ವಿವಿದೆಡೆ ಉತ್ತಮ ಮಳೆಯಾಗಲಿದೆ. 13 ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ ಘೋಷಣೆ ಮಾಡಲಾಗಿದೆ. ಮೇ.22 ಹಾಗೂ  23  ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೆ ಸುಳಿಗಾಳಿ ಹಾಗೂ ಹೆಚ್ಚಿನ  ತೇವಾಂಶದ ಕಾರಣದಿಂದ ಈಗ ರಾಜ್ಯದಲ್ಲಿ ಮಳೆಯಾಗುತ್ತಿದೆ.

Advertisement
Advertisement
Advertisement

ಶುಕ್ರವಾರ ರಾತ್ರಿಯೇ ಕರ್ನಾಟಕ, ಗೋವಾ, ತಮಿಳುನಾಡಿನ ವಿವಿದೆಡೆ  ಗುಡುಗು ಸಹಿತ ಮಳೆಯಾಗುವ ಸಾದ್ಯತೆ ಇದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರಕ್ಕೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮುಂದಿನ 24 ಗಂಟೆಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಮುಂದಿನ 48 ಗಂಟೆಗಳ ಕಾಲ ಉತ್ತಮ ಮಳೆಯಾಗಲಿದೆ. ಮೇ.24  ರ ನಂತರ ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ಉಂಟಾಗುವ ಚಂಡಮಾರುತ “ಯಾಸ್”‌ ನಿಂದ ರಾಜ್ಯದಲ್ಲಿ  ಅಷ್ಟೊಂದು ಪರಿಣಾಮ ಸದ್ಯಕ್ಕೆ ಕಂಡುಬರುತ್ತಿಲ್ಲ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆಯ ಔಷಧೀಯ ಗುಣ | “we made” ಅಡಿಕೆಯ ಲಿಕ್ವಿಡ್‌ ಸೋಪು | ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ |

ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…

3 hours ago

ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ

ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…

4 hours ago

ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |

ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…

13 hours ago

ಗುಬ್ಬಚ್ಚಿ ಸಂಕುಲ ರಕ್ಷಣೆಗೆ ಪ್ರಧಾನಿ ಕರೆ | ಬೇಲೂರಿನಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ

ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…

14 hours ago

ಮಹಿಳಾ ಉದ್ಯಮಿಗಳಿಗೆ  ಎನ್‍ಆರ್ ಎಲ್‍ಎಮ್ ಯೋಜನೆ ಸ್ಪೂರ್ತಿಯ ಸೆಲೆಯಾಗಿದೆ

ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ  ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…

14 hours ago

ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ,  ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ  ಹಾಕಲು ಜಿಲ್ಲಾಡಳಿತ ಸೂಚನೆ

ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…

14 hours ago