ರಾಜ್ಯದ ಉತ್ತರ ಒಳನಾಡಿನಲ್ಲಿ ನಿರೀಕ್ಷಿತ ಮಳೆಯಾಗದೇ ಅನ್ನದಾತರು ಕಂಗಾಲು ಆಗಿದ್ದಾರೆ. ಜೂನ್ ಎರಡನೇ ವಾರದಲ್ಲಿ ಸಣ್ಣ ಮಳೆಯಾಗಿದ್ದರಿಂದ ಬಿತ್ತನೆ ಮಾಡಿದ್ದ ರೈತರು ಬೆಳೆ ಒಣಗುವ ಆತಂಕದಲ್ಲಿ ಆಗಸ ನೋಡುತ್ತಿದ್ದಾರೆ. ಇದೇ ವೇಳೆ ರಾಜ್ಯದ ಮಲೆನಾಡು, ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗಿತ್ತು.
ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಅಲ್ಲಲ್ಲಿ ಚದುರಿದ ರೀತಿಯಲ್ಲಿ ಮಳೆಯಾಗಿರುವ ವರದಿಗಳು ಬರುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ 15 ದಿನಗಳಿಂದ ಮೋಡ ಕವಿದ ವಾತಾವರಣದ ಜೊತೆ ಶೀತಗಾಳಿ ಸಹ ಆರಂಭವಾಗಿದೆ.
ನಿರೀಕ್ಷಿತ ಮಳೆಯಾಗದೆ ಬಹುತೇಕ ಜಿಲ್ಲೆಗಳ ರೈತರು ಕಂಗಾಲಾಗಿದ್ದಾರೆ. ಮಳೆಯಾಗದೇ ಇದ್ದರೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel