Advertisement
MIRROR FOCUS

ಅಡಿಕೆ-ಕಾಳುಮೆಣಸು ಬೆಳೆವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ – ದಕ್ಷಿಣ ಕನ್ನಡ ರೈತರಿಗೆ ಮಹತ್ವದ ಮಾಹಿತಿ

Share

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಮಹತ್ವದ ಮಾಹಿತಿಯೊಂದನ್ನು ತೋಟಗಾರಿಕೆ ಇಲಾಖೆ ನೀಡಿದೆ. ಹವಾಮಾನ ವೈಪರೀತ್ಯದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರ ಒದಗಿಸುವ ಉದ್ದೇಶದಿಂದ 2026-27ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ.

ಈ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಪಡೆಯದ ರೈತರು ನೋಂದಣಿಯಾಗಬಹುದಾಗಿದೆ. ಬೆಳೆಸಾಲ ಪಡೆದ ರೈತರು ತಮ್ಮ ಸಾಲ ಹೊಂದಿರುವ ಬ್ಯಾಂಕ್ ಮೂಲಕ ಹಾಗೂ ಬೆಳೆಸಾಲ ಹೊಂದಿಲ್ಲದ ರೈತರು ತಮ್ಮ ಉಳಿತಾಯ ಖಾತೆ ಇರುವ ಬ್ಯಾಂಕ್ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದಲ್ಲದೆ, ಸಾಮಾನ್ಯ ಸೇವಾ ಕೇಂದ್ರಗಳು (CSC) ಹಾಗೂ ಗ್ರಾಮ ಒನ್ ಕೇಂದ್ರಗಳ ಮೂಲಕವೂ ರೈತರಿಗೆ ನೋಂದಣಿ ಸೌಲಭ್ಯ ಕಲ್ಪಿಸಲಾಗಿದೆ.

ಪ್ರೀಮಿಯಂ ಎಷ್ಟು?: ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ

ಅಡಿಕೆ ಬೆಳೆ – ಪ್ರತಿ ಹೆಕ್ಟೇರಿಗೆ ₹6,400 ಪ್ರೀಮಿಯಂ

ಕಾಳುಮೆಣಸು ಬೆಳೆ – ಪ್ರತಿ ಹೆಕ್ಟೇರಿಗೆ ₹2,350 ಪ್ರೀಮಿಯಂ

ನೋಂದಣಿಗೆ ಕೊನೆಯ ದಿನ :ಯೋಜನೆಯಡಿ ನೋಂದಣಿಯಾಗಲು 2026ರ ಜುಲೈ 31 ಕೊನೆಯ ದಿನಾಂಕವಾಗಿದೆ. ರೈತರು ಕೊನೆಯ ಕ್ಷಣದವರೆಗೆ ಕಾಯದೆ ಮುಂಚಿತವಾಗಿ ನೋಂದಣಿ ಮಾಡಿಕೊಂಡು ಯೋಜನೆಯ ಸೌಲಭ್ಯ ಪಡೆಯುವಂತೆ ಇಲಾಖೆ ಮನವಿ ಮಾಡಿದೆ.

ವಿಮಾ ಸಂಸ್ಥೆ ಯಾವುದು? : 2026-27ನೇ ಸಾಲಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೋಜನೆಯ ಅನುಷ್ಠಾನಕ್ಕಾಗಿ TATA AIG General Insurance ಸಂಸ್ಥೆಯನ್ನು ವಿಮಾ ಕಂಪನಿಯಾಗಿ ಆಯ್ಕೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ವಿಮಾ ಸಂಸ್ಥೆಯ ಪ್ರತಿನಿಧಿಗಳ ಮೂಲಕ ಯೋಜನೆಗೆ ಸಂಬಂಧಿಸಿದ ಮಾಹಿತಿ ಪಡೆಯಬಹುದು.

ರೈತರು ಹವಾಮಾನ ವೈಪರೀತ್ಯ, ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇತರ ಪ್ರಕೃತಿ ವಿಕೋಪಗಳಿಂದ ಉಂಟಾಗಬಹುದಾದ ನಷ್ಟವನ್ನು ಕಡಿಮೆಗೊಳಿಸಲು ಈ ಯೋಜನೆಯಲ್ಲಿ ಭಾಗವಹಿಸುವುದು ಅಗತ್ಯವಾಗಿದೆ ಎಂದು ಇಲಾಖೆ ತಿಳಿಸಿದೆ.

ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಜಂಟಿನಿರ್ದೇಶಕ ಐ.ಕೆ. ದೊಡ್ಡಮನಿ (ದೂ.9448999226), ಮಂಗಳೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರವೀಣ ಕೆ (ದೂ.9449258204), ಬಂಟ್ವಾಳ  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರದೀಪ್ ಡಿಸೋಜ (ದೂ. 9448206393), ಪುತ್ತೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ರೇಖಾ.ಎ (ದೂ.9731854527), ಸುಳ್ಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪ್ರಮೋದ್ ಸಿ.ಎಂ (ದೂ.ಸಂ:9880993238), ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ ಕೆ.ಎಸ್(ದೂ.ಸಂ: 9448336863), ಟಾಟಾ ಎಐಜಿ ಸಂಸ್ಥೆಯ ಪ್ರತಿನಿಧಿ ಅಶುತೋಶ್ (ದೂ.ಸಂ: 8809140983) ಸಂಪರ್ಕಿಸಬಹುದು ಎಂದು ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Karnataka government has opened enrollment for the Weather-Based Crop Insurance Scheme for the 2026-27 monsoon and post-monsoon seasons. In Dakshina Kannada district, arecanut and black pepper crops have been notified under the scheme. Farmers can enroll through banks, CSC centers, or Grama One centers before July 31, 2026. The farmer premium is ₹6,400 per hectare for arecanut and ₹2,350 per hectare for black pepper.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

8 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

16 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

23 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago