Advertisement
MIRROR FOCUS

ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಸೌಲಭ್ಯಕ್ಕೆ ರೈತರ ಸೌಲಭ್ಯಕ್ಕೆ ಆಹ್ವಾನ

Share

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ತಾಲೂಕುವಾರು ಅನುಷ್ಠಾನಗೊಳಿಸಲು ಸರ್ಕಾರ ಮಂಜೂರಾತಿ ನೀಡಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಿದ್ದರಾಮಯ್ಯ ಬರಗಿಮಠ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾನಗಲ್, ಹಿರೇಕೆರೂರು, ರಟ್ಟೀಹಳ್ಳಿ ಹಾಗೂ ಶಿಗ್ಗಾವಿ ತಾಲೂಕಿನಲ್ಲಿ ಅಡಿಕೆ, ಶುಂಠಿ, ಮಾವು ಮತ್ತು ಹಸಿ ಮೆಣಸಿನಕಾಯಿ ಬೆಳೆ, ಹಾವೇರಿ, ಸವಣೂರ, ರಾಣೆಬೆನ್ನೂರು ತಾಲೂಕುಗಳಲ್ಲಿ ಹಸಿ ಮೆಣಸಿಕಾಯಿ, ಮಾವು ಬೆಳೆಗಳಿಗೆ ವಿಮೆ ಅನುಷ್ಠಾನಗೊಳಿಸಲಾಗುತ್ತಿದೆ.  ಬೆಳೆ ಸಾಲ ಪಡೆದ ರೈತರು ಹಾಗೂ ಬೆಳೆ ಸಾಲ ಪಡೆಯದೇ ಇರುವ ರೈತರು, ತಮ್ಮ ಆಧಾರ್ ಕಾರ್ಡ್ ಪ್ರತಿ, ಪಹಣಿ ಪ್ರತಿ ಹಾಗೂ ಬ್ಯಾಂಕ್ ಪಾಸ್‌ಬುಕ್ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕುಗಳಲ್ಲಿ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ವಿಮಾ ಯೋಜನೆಯಡಿ ನೋಂದಾಯಿಸಿಕೊಳ್ಳಬೇಕು.

ಜುಲೈ 31 ಕೊನೆಯ ದಿನವಾಗಿದ್ದು, ಹಾವೇರಿ ಜಿಲ್ಲೆಗೆ ವಿಮೆ ಅನುಷ್ಠಾನಗೊಳಿಸಲು ಎಸ್.ಡಿ.ಎಫ್.ಸಿ ಎರಗೊ ಜನರಲ್ ಇನ್ಶುರೆನ್ಸ್ ಕಂಪನಿಗೆ ಜವಾಬ್ದಾರಿ ವಹಿಸಲಾಗಿದೆ.  ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರು, ಕಾಲಕಾಲಕ್ಕೆ ಖುದ್ದಾಗಿ ಅಥವಾ ಗ್ರಾಮ ಲೆಕ್ಕಾಧಿಕಾರಿ ಸಮ್ಮುಖದಲ್ಲಿ ಬೆಳೆ ಸಮೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕು. ಇಲ್ಲವಾದಲ್ಲಿ ಬೆಳೆ ವಿಮೆ ಕ್ಲೇಮ್ ಆಗುವುದಿಲ್ಲ. ವಿಮೆ ಕುರಿತ ಮಾಹಿತಿಗೆ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ತೋಟಗಾರಿಕೆ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಸಿದ್ದರಾಮಯ್ಯ ಬರಗಿಮಠ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

4 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

10 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

21 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago