ಭಾರತದಲ್ಲಿ ವಿವಿದೆಡೆ ಒಂದೊಂದು ಹವಾಮಾನ ಸಮಸ್ಯೆ ತಂದೊಡ್ಡುತ್ತಿದೆ. ಹವಾಮಾನ ವೈಪರೀತ್ಯ ಹಲವು ಕಡೆ ಕಾಡುತ್ತಿದೆ. ಭಾರತ ಹವಾಮಾನ ಇಲಾಖೆಯ ಹವಾಮಾನ ಬುಲೆಟಿನ್ ಪ್ರಕಾರ ಮಾರ್ಚ್ 19 ರವರೆಗೆ ದೇಶದ ಹಲವು ಭಾಗಗಳಲ್ಲಿ ಹಿಮಪಾತ, ಮಳೆ, ಗುಡುಗು ಮತ್ತು ಆಲಿಕಲ್ಲು ಮಳೆಯ ಎಚ್ಚರಿಕೆಗಳನ್ನು ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕೇರಳ, ಮಾಹೆ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿಸಿ ಮತ್ತು ಒಣ ಹವೆ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಭಾನುವಾರದವರೆಗೆ ಕೇರಳದ ಒಂಬತ್ತು ಜಿಲ್ಲೆಗಳಲ್ಲಿ ಹೀಟ್ ಅಲರ್ಟ್ ಬಗ್ಗೆ ಎಚ್ಚರಿಸಿದೆ.ರಾಜ್ಯದಲ್ಲಿ ಕೂಡಾ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಲೇ ಇದೆ. ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ ಎಚ್ಚರಿಕೆ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಭಾನುವಾರದವರೆಗೆ ಕೇರಳದ ಒಂಬತ್ತು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಎಲ್ಲೋ ಎಚ್ಚರಿಕೆಯ ಎಲರ್ಟ್ ನೀಡಿದೆ. ಇದೇ ವೇಳೆ ದೇಶದ ಹಲವಾರು ರಾಜ್ಯಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಹಿಮಾಚಲ ಮತ್ತು ಉತ್ತರಾಖಂಡಕ್ಕೆ ರೆಡ್ ಅಲರ್ಟ್ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ಹಿಮಾಚಲ, ಉತ್ತರಾಖಂಡ ಮತ್ತು ಪಂಜಾಬ್, ಹರಿಯಾಣ ಮತ್ತು ದೇಶದ ಹಲವಾರು ಭಾಗಗಳ ಪಕ್ಕದ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ತಕ್ಕಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ.
ರಾಷ್ಟ್ರ ರಾಜಧಾನಿಯಲ್ಲಿ ದೆಹಲಿಯಲ್ಲಿ ನಿರಂತರ ಮಳೆಯಿಂದಾಗಿ, ದೆಹಲಿಯ ಎಲ್ಲಾ ಶಾಲೆಗಳಿಗೆ ರಜೆ ನೀಡುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದರು.
ಪುಣೆಯಲ್ಲಿ ಮಂಗಳವಾರ ತಾಪಮಾನದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ, ಶಿವಾಜಿನಗರ ಋತುವಿನ ಗರಿಷ್ಠ ಗರಿಷ್ಠ ತಾಪಮಾನ 37.3 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ. ಪುಣೆಯಲ್ಲಿ ಮಂಗಳವಾರ ತಾಪಮಾನದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ, ಮುಂದಿನ ಮೂರು ದಿನಗಳಲ್ಲಿ ನಗರವು 37 ರಿಂದ 38 ಡಿಗ್ರಿ ವರೆಗಿನ ತಾಪಮಾನಕ್ಕೆ ಸಾಕ್ಷಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದ ಮಾಹಿತಿಯ ಪ್ರಕಾರ, ಪುಣೆ ನಗರದಲ್ಲಿ ಕಳೆದ ನಾಲ್ಕೈದು ದಿನಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ.
ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 18 ರವರೆಗೆ ಬಿಸಿಲಿನ ತಾಪಮಾನದಿಂದ ದೂವಾಗಲಿ ಮಳೆಯ ಲಕ್ಷಣ ಕಾಣುತ್ತಿದೆ.ಕೋಲ್ಕತ್ತಾ ವಿಚಿತ್ರ ಹವಾಮಾನದತ್ತ ಸಾಗುತ್ತಿದೆ. ಒಡಿಶಾದ ಕೆಲವು ಭಾಗಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠದಾಖಲಾಗಿದೆ.
ಉತ್ತರ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು ಜನ ಮನೆ ಬಿಟ್ಟು ಹೊರಬಾರದಂತ ಪರಿಸ್ಥಿತಿ ಎದುರಾಗಿದೆ. ಒಂದೆಡೆ ನೀರಿನ ಸಮಸ್ಯೆ ಮತ್ತೊಂದೆಡೆ ತಾಪಮಾನದ ಏರಿಕೆಗೆ ಜನ ತತ್ತರಿಸಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಿಗೆ ಉಷ್ಣ ಅಲೆ ಎದುರಾಗಿದ್ದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ ಸೇರಿದಂತೆ ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಪ್ರದೇಶಗಳಲ್ಲಿ ಬಿಸಿ ಗಾಳಿ ಬೀಸಲಿದೆ(Heat Wave) ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.