Advertisement
MIRROR FOCUS

ದೇಶದ ಹವಾಮಾನ ಪರಿಸ್ಥಿತಿ | ಕೇರಳದಲ್ಲಿ ಹೀಟ್‌ ಎಲರ್ಟ್‌ | ಉತ್ತರಾಖಂಡಕ್ಕೆ ರೆಡ್ ಅಲರ್ಟ್ | ದೆಹಲಿಯಲ್ಲಿ ಕನಿಷ್ಟ ತಾಪಮಾನ | ಉತ್ತರ ಕರ್ನಾಟಕದಲ್ಲಿ ಹೀಟ್‌ ವೇವ್ ಎಚ್ಚರಿಕೆ |

Share

ಭಾರತದಲ್ಲಿ ವಿವಿದೆಡೆ ಒಂದೊಂದು ಹವಾಮಾನ ಸಮಸ್ಯೆ ತಂದೊಡ್ಡುತ್ತಿದೆ. ಹವಾಮಾನ ವೈಪರೀತ್ಯ ಹಲವು ಕಡೆ ಕಾಡುತ್ತಿದೆ. ಭಾರತ ಹವಾಮಾನ ಇಲಾಖೆಯ  ಹವಾಮಾನ ಬುಲೆಟಿನ್ ಪ್ರಕಾರ ಮಾರ್ಚ್ 19 ರವರೆಗೆ ದೇಶದ ಹಲವು ಭಾಗಗಳಲ್ಲಿ ಹಿಮಪಾತ, ಮಳೆ, ಗುಡುಗು ಮತ್ತು ಆಲಿಕಲ್ಲು ಮಳೆಯ ಎಚ್ಚರಿಕೆಗಳನ್ನು ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕೇರಳ, ಮಾಹೆ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿಸಿ ಮತ್ತು ಒಣ ಹವೆ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಭಾನುವಾರದವರೆಗೆ ಕೇರಳದ ಒಂಬತ್ತು ಜಿಲ್ಲೆಗಳಲ್ಲಿ ಹೀಟ್ ಅಲರ್ಟ್ ಬಗ್ಗೆ ಎಚ್ಚರಿಸಿದೆ.ರಾಜ್ಯದಲ್ಲಿ‌ ಕೂಡಾ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಲೇ ಇದೆ. ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ ಎಚ್ಚರಿಕೆ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ  ಭಾನುವಾರದವರೆಗೆ ಕೇರಳದ ಒಂಬತ್ತು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಎಲ್ಲೋ ಎಚ್ಚರಿಕೆಯ ಎಲರ್ಟ್ ನೀಡಿದೆ. ಇದೇ ವೇಳೆ ದೇಶದ  ಹಲವಾರು ರಾಜ್ಯಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಹಿಮಾಚಲ ಮತ್ತು ಉತ್ತರಾಖಂಡಕ್ಕೆ ರೆಡ್ ಅಲರ್ಟ್ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ಹಿಮಾಚಲ, ಉತ್ತರಾಖಂಡ ಮತ್ತು ಪಂಜಾಬ್, ಹರಿಯಾಣ ಮತ್ತು ದೇಶದ ಹಲವಾರು ಭಾಗಗಳ ಪಕ್ಕದ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ತಕ್ಕಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ.

ರಾಷ್ಟ್ರ ರಾಜಧಾನಿಯಲ್ಲಿ ದೆಹಲಿಯಲ್ಲಿ ನಿರಂತರ ಮಳೆಯಿಂದಾಗಿ, ದೆಹಲಿಯ ಎಲ್ಲಾ ಶಾಲೆಗಳಿಗೆ  ರಜೆ ನೀಡುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದರು.

ಪುಣೆಯಲ್ಲಿ ಮಂಗಳವಾರ ತಾಪಮಾನದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ, ಶಿವಾಜಿನಗರ ಋತುವಿನ ಗರಿಷ್ಠ ಗರಿಷ್ಠ ತಾಪಮಾನ 37.3 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ. ಪುಣೆಯಲ್ಲಿ ಮಂಗಳವಾರ ತಾಪಮಾನದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ, ಮುಂದಿನ ಮೂರು ದಿನಗಳಲ್ಲಿ ನಗರವು 37 ರಿಂದ 38 ಡಿಗ್ರಿ ವರೆಗಿನ ತಾಪಮಾನಕ್ಕೆ ಸಾಕ್ಷಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದ ಮಾಹಿತಿಯ ಪ್ರಕಾರ, ಪುಣೆ ನಗರದಲ್ಲಿ ಕಳೆದ ನಾಲ್ಕೈದು ದಿನಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ.

ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 18 ರವರೆಗೆ ಬಿಸಿಲಿನ ತಾಪಮಾನದಿಂದ ದೂವಾಗಲಿ ಮಳೆಯ ಲಕ್ಷಣ ಕಾಣುತ್ತಿದೆ.ಕೋಲ್ಕತ್ತಾ ವಿಚಿತ್ರ ಹವಾಮಾನದತ್ತ ಸಾಗುತ್ತಿದೆ. ಒಡಿಶಾದ ಕೆಲವು ಭಾಗಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠದಾಖಲಾಗಿದೆ.

ಉತ್ತರ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು ಜನ ಮನೆ ಬಿಟ್ಟು ಹೊರಬಾರದಂತ ಪರಿಸ್ಥಿತಿ ಎದುರಾಗಿದೆ. ಒಂದೆಡೆ ನೀರಿನ ಸಮಸ್ಯೆ ಮತ್ತೊಂದೆಡೆ ತಾಪಮಾನದ ಏರಿಕೆಗೆ ಜನ ತತ್ತರಿಸಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಿಗೆ ಉಷ್ಣ ಅಲೆ ಎದುರಾಗಿದ್ದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ ಸೇರಿದಂತೆ ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಪ್ರದೇಶಗಳಲ್ಲಿ ಬಿಸಿ ಗಾಳಿ ಬೀಸಲಿದೆ(Heat Wave) ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

19 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago