ಹವಾಮಾನ ವರದಿ| 21-11-2024 | ಮಳೆಯ ಸಾಧ್ಯತೆ ಕಡಿಮೆ | ನ.26 ಸುಮಾರಿಗೆ ಚಂಡಮಾರುತ ಸಾಧ್ಯತೆ |

November 21, 2024
2:52 PM

22.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಹಗುರ ಮೋಡಗಳು ಆವರಿಸುವ ಸಾಧ್ಯತೆಗಳಿವೆ. ಮಳೆಯ ಸಾಧ್ಯತೆಗಳಿಲ್ಲ.

ಉತ್ತರ ಸುಮಾತ್ರ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯು ಪ್ರಭಲಗೊಂಡು, ನವೆಂಬರ್ 26ರ ಸುಮಾರಿಗೆ ಚಂಡಮಾರುತವಾಗಿ ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಅಲ್ಲಿಂದ ದುರ್ಬಲಗೊಂಡು ಉತ್ತರಾಭಿಮುಖವಾಗಿ ಚಲಿಸಿ ತಮಿಳುನಾಡು, ಆಂದ್ರಾ ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಇದರ ಪ್ರಭಾವದಿಂದ ಕರ್ನಾಟಕದಲ್ಲಿ ನವೆಂಬರ್ 27ರಿಂದ ಡಿಸೆಂಬರ್ 2ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದ್ದರೂ, ನವೆಂಬರ್ 25ರ ತನಕ ಕಾದು ನೋಡಬೇಕಾಗಿದೆ. ಆಮೇಲೆ ಸ್ಪಷ್ಟತೆ ಸಿಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror