ಹವಾಮಾನ ವರದಿ | 05-12-2024 | ಡಿ.9 ರ ತನಕವೂ ಮಳೆ ಮುಂದುವರಿಯುವ ಲಕ್ಷಣ | ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಉಂಟಾಗುವ ಲಕ್ಷಣ |

December 5, 2024
11:33 AM
ಡಿಸೆಂಬರ್ 8 ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು,ಪರಿಸ್ಥಿತಿ ಕಾದು ನೋಡಬೇಕಾಗಿದೆ.

06.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. ಕಾಸರಗೋಡು ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 9 ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಸಂಜೆ ರಾತ್ರಿ ಮೋಡದ ವಾತಾವರಣದ ಜೊತೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 10ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ, ಹಾವೇರಿ, ಗದಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ರಾಮನಗರ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಒಳನಾಡು ಭಾಗಗಳಲ್ಲಿ ಡಿಸೆಂಬರ್ 7 ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಬಿಡುವು ಪಡೆದರೂ, ಡಿಸೆಂಬರ್ 12 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮತ್ತೆ ಮಳೆಯ ಮುನ್ಸೂಚೆನೆ ಇದೆ ಬದಲಾಗಬಹುದು. ಡಿಸೆಂಬರ್ 8 ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು,ಪರಿಸ್ಥಿತಿ ಕಾದು ನೋಡಬೇಕಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror