Advertisement
ಸುದ್ದಿಗಳು

ಹವಾಮಾನ ವರದಿ | 06-12-2024 | ಕೆಲವು ಕಡೆ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆ ಸಾಧ್ಯತೆ | ಡಿ.9 ರಿಂದ ಮಳೆ ಸಂಪೂರ್ಣ ಕಡಿಮೆ |

Share

07.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಜೊತೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಇನ್ನು ದಿನ ಕಳೆದಂತೆ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಡಿಸೆಂಬರ್ 9 ರಿಂದ ಸಂಪೂರ್ಣ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಡಿಸೆಂಬರ್ 9ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ಆದರೆ ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ವಿಜಯಪುರ ಜಿಲ್ಲೆಯಲ್ಲಿ ಡಿಸೆಂಬರ್ 7ರ ಮುಂಜಾನೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಂದೆರಡು ಕಡೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಡಿಸೆಂಬರ್ 12ರ ತನಕವೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ಉತ್ತರ ಒಳನಾಡು ಭಾಗಗಳಲ್ಲಿ ಡಿಸೆಂಬರ್ 9ರ ತನ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಅರಬ್ಬಿ ಸಮುದ್ರದ ತಿರುವಿಕೆಯು (ಫೆಂಗಲ್ ಚಂಡಮಾರುತ) ಸಂಪೂರ್ಣ ಶಿಥಿಲಗೊಳ್ಳುವ ಹಂತದಲ್ಲಿದ್ದು, ಈಗಿನ ಹಿಂಗಾರು ರೀತಿಯ ಮಳೆಯೂ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ನಿಕೋಬಾರ್ ಕರಾವಳಿಲ್ಲಿ ಉಂಟಾಗಿರುವ ತಿರುವಿಕೆಯು ಶ್ರೀಲಂಕಾ ಕರಾವಳಿ ಸಮೀಪ ಸಾಗುತ್ತಿದ್ದು, ಡಿಸೆಂಬರ್ 12 ಅಥವಾ 13ರ ವೇಳೆಗೆ ತಮಿಳುನಾಡು ಕರಾವಳಿಗೆ ತಲಪುವ ಸಾಧ್ಯತೆ ಇದೆ. ಹಾಗೇನಾದರು ಸಂಭವಿಸಿದರೆ ಡಿ. 13ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

14 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

1 day ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

1 day ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

1 day ago