ಹವಾಮಾನ ವರದಿ | 19-12-2024 | ಕಡಿಮೆಯಾದ ಚಳಿ | ಒಣ ಹವೆ ಮುಂದುವರಿಕೆ | ಡಿ.25 ರಿಂದ ತುಂತುರು ಮಳೆ ಸಾಧ್ಯತೆ |

December 19, 2024
2:54 PM

20.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸ್ವಲ್ಪ ಮಟ್ಟಿಗೆ ಚಳಿ ಪ್ರಮಾಣವು ಕಡಿಮೆಯಾಗಿದ್ದು ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿ. 22ರಿಂದ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿದ್ದು, ಸೆಖೆ ಆರಂಭವಾಗುವ ಲಕ್ಷಣಗಳಿವೆ.  25ರಿಂದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಚಳಿಯ ಪ್ರಮಾಣ ಈಗಾಗಲೇ ಕಡಿಮೆಯಾಗಿದ್ದು, ಡಿ. 22ರಿಂದ ಮೋಡದ ವಾತಾವರಣದ ಜೊತೆಗೆ ತುಂತುರು ಮಳೆಯ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಚಳಿಯ ಪ್ರಮಾಣ ಹೆಚ್ಚಿರಬಹುದು. ದಕ್ಷಿಣ ಒಳನಾಡಿನ ಚಳಿಯ ಪ್ರಮಾಣವು ಕಡಿಮೆಯಾಗಿದ್ದು ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಕೋಲಾರದ ತಮಿಳುನಾಡು ಹಾಗೂ ಆಂದ್ರಾ ಗಡಿಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಡಿ.22ರಿಂದ ಚಳಿಯ ಪ್ರಮಾಣವು ಕಡಿಮೆಯಾಗುವ ಸಾಧ್ಯತೆಗಳಿದ್ದು, 25 ಅಥವಾ 26ರಿಂದ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಈಶಾನ್ಯಕ್ಕೆ ಚಲಸುತ್ತಿದ್ದರೂ ನಿಧಾನ ಗತಿಯಲ್ಲಿದೆ. ಶಿಥಿಲಗೊಳ್ಳಲು ಸಮಯ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಡಿ. 22ರಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಗಾಳಿಯು ಭೂಪ್ರವೇಶಿಸಿ ಜೊತೆಯಾಗಿ ಉತ್ತರ ಭಾರತದ ಕಡೆಗೆ ಚಲಿಸುವುದರಿಂದ ರಾಜ್ಯದಾದ್ಯಂತ ಚಳಿಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳೊಂದಿಗೆ ಅಲ್ಲಲ್ಲಿ ಮಳೆಯ ವಾತಾವರಣವು ಸೃಷ್ಠಿಯಾಗುವ ಸಾಧ್ಯತೆಗಳಿವೆ.
ಇದರೊಂದಿಗೆ ಉತ್ತರ ರಾಜಸ್ಥಾನದಲ್ಲಿ ತಿರುಗುವಿಕೆ ಆರಂಭವಾಗುವ ಲಕ್ಷಣಗಳಿದ್ದು. ಉತ್ತರ ಭಾರತದ ಹಲವು ಕಡೆ ಡಿ. 24ರ ನಂತರ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror