06.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ವಿಜಯಪುರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ, ಚಿತ್ರದುರ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಪ್ರಕಾರ ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಶಿಥಿಲಗೊಳ್ಳುತ್ತಿದೆ. ಜೂನ್ 6 ರಿಂದ 9ರ ತನಕ ಮುಂಗಾರು ಸ್ವಲ್ಪ ಚುರುಕಾದರೂ ಅರಬ್ಬಿ ಸಮುದ್ರದ ಪಶ್ಚಿಮ ಭಾಗದಿಂದ ಈಚೆಗೆ ಮಾರುತಗಳ ಒತ್ತಡ ಕಡಿಮೆ ಇರುವುದರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಈಗ ಅರಬ್ಬಿ ಸಮುದ್ರ ದಕ್ಷಿಣ ಭಾಗದಿಂದ ಶ್ರೀಲಂಕಾ ಮೂಲಕ ಬಂಗಾಳಕೊಲ್ಲಿಗೆ ಬೀಸುತ್ತಿರುವ ಗಾಳಿಯ ಒತ್ತಡವೂ ಕಡಿಮೆಯಾಗುವ ಸೂಚನೆಗಳಿರುವುದರಿಂದ ಒಳನಾಡು ಭಾಗಗಳಲ್ಲಿಯೂ ಈಗ ಆಗುತ್ತಿರುವ ಮಳೆಯು ಇನ್ನೆರಡು ದಿನಗಳಲ್ಲಿ ಕಡಿಮೆಯಾಗುವ ಲಕ್ಷಣಗಳಿವೆ. ಒಟ್ಟಿನಲ್ಲಿ ಮುಂಗಾರು ಮುಂದಿನ 10 ದಿನಗಳವರೆಗೂ ದುರ್ಬಲವಾಗಿರಲಿದೆ.