Karnataka Weather | 05-6-2024 | ಇಂದು ಹಲವು ಕಡೆ ಮಧ್ಯಾಹ್ನ ನಂತರ ಮಳೆ | ಮುಂದಿನ 10 ದಿನಗಳವರೆಗೂ ಮುಂಗಾರು ದುರ್ಬಲ ಏಕೆ..?

June 5, 2024
11:45 AM
ಜೂನ್ 6 ರಿಂದ 9ರ ತನಕ ಮುಂಗಾರು ಸ್ವಲ್ಪ ಚುರುಕಾದರೂ ಅರಬ್ಬಿ ಸಮುದ್ರದ ಪಶ್ಚಿಮ ಭಾಗದಿಂದ ಈಚೆಗೆ ಮಾರುತಗಳ ಒತ್ತಡ ಕಡಿಮೆ ಇರುವುದರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.

06.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ವಿಜಯಪುರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ, ಚಿತ್ರದುರ್ಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನ ಪ್ರಕಾರ ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಶಿಥಿಲಗೊಳ್ಳುತ್ತಿದೆ. ಜೂನ್ 6 ರಿಂದ 9ರ ತನಕ ಮುಂಗಾರು ಸ್ವಲ್ಪ ಚುರುಕಾದರೂ ಅರಬ್ಬಿ ಸಮುದ್ರದ ಪಶ್ಚಿಮ ಭಾಗದಿಂದ ಈಚೆಗೆ ಮಾರುತಗಳ ಒತ್ತಡ ಕಡಿಮೆ ಇರುವುದರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಈಗ ಅರಬ್ಬಿ ಸಮುದ್ರ ದಕ್ಷಿಣ ಭಾಗದಿಂದ ಶ್ರೀಲಂಕಾ ಮೂಲಕ ಬಂಗಾಳಕೊಲ್ಲಿಗೆ ಬೀಸುತ್ತಿರುವ ಗಾಳಿಯ ಒತ್ತಡವೂ ಕಡಿಮೆಯಾಗುವ ಸೂಚನೆಗಳಿರುವುದರಿಂದ ಒಳನಾಡು ಭಾಗಗಳಲ್ಲಿಯೂ ಈಗ ಆಗುತ್ತಿರುವ ಮಳೆಯು ಇನ್ನೆರಡು ದಿನಗಳಲ್ಲಿ ಕಡಿಮೆಯಾಗುವ ಲಕ್ಷಣಗಳಿವೆ. ಒಟ್ಟಿನಲ್ಲಿ ಮುಂಗಾರು ಮುಂದಿನ 10 ದಿನಗಳವರೆಗೂ ದುರ್ಬಲವಾಗಿರಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror