ಹವಾಮಾನ ವರದಿ | 10-06-2024 | ಕರಾವಳಿ ಭಾಗದಲ್ಲಿ ಉತ್ತಮ ಮಳೆ ಸಾಧ್ಯತೆ | ಜೂ.11ರ ತನಕ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆ ನಿರೀಕ್ಷೆ |

June 10, 2024
12:03 PM
ಜೂನ್ 11ರ ತನಕ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಜೂನ್ 12ರಿಂದ ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಕರಾವಳಿ ಭಾಗಗಳಲ್ಲಿ ಜೂನ್ 13ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

11.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಕೊಡಗು, ಹಾಸನ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮಹಾರಾಷ್ಟ್ರದ ಕರಾವಳಿ ಮೂಲಕ ಪ್ರವೇಶಿಸಿದ ಮುಂಗಾರು ಮಾರುತಗಳು ಮಧ್ಯ ಮಹಾರಾಷ್ಟ್ರದಿಂದ ದಕ್ಷಿಣಾಭಿಮುಖವಾಗಿ ಚಲಿಸಿ ಕರ್ನಾಟಕಕ್ಕೆ ಪ್ರವೇಶಿಸುವುದರಿಂದ ವಿಜಯಪುರ ಭಾರಿ ಮಳೆಯ ಮುನ್ಸೂಚನೆ ಇದೆ . ಕೊಪ್ಪಳ, ಯಾದಗಿರಿ, ಕಲಬುರ್ಗಿ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚೆನೆ ಇದೆ.

ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ

ಈಗಿನಂತೆ ಜೂನ್ 11ರ ತನಕ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಜೂನ್ 12ರಿಂದ ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಕರಾವಳಿ ಭಾಗಗಳಲ್ಲಿ ಜೂನ್ 13ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror