11.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಕೊಡಗು, ಹಾಸನ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮಹಾರಾಷ್ಟ್ರದ ಕರಾವಳಿ ಮೂಲಕ ಪ್ರವೇಶಿಸಿದ ಮುಂಗಾರು ಮಾರುತಗಳು ಮಧ್ಯ ಮಹಾರಾಷ್ಟ್ರದಿಂದ ದಕ್ಷಿಣಾಭಿಮುಖವಾಗಿ ಚಲಿಸಿ ಕರ್ನಾಟಕಕ್ಕೆ ಪ್ರವೇಶಿಸುವುದರಿಂದ ವಿಜಯಪುರ ಭಾರಿ ಮಳೆಯ ಮುನ್ಸೂಚನೆ ಇದೆ . ಕೊಪ್ಪಳ, ಯಾದಗಿರಿ, ಕಲಬುರ್ಗಿ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಗದಗ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಬೀದರ್ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಹಾವೇರಿ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ
ಈಗಿನಂತೆ ಜೂನ್ 11ರ ತನಕ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಜೂನ್ 12ರಿಂದ ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಕರಾವಳಿ ಭಾಗಗಳಲ್ಲಿ ಜೂನ್ 13ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…