14.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮತ್ತು ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ (ಚಿಕ್ಕೋಡಿ ಸಹಿತ), ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜುಲೈ 14ರಿಂದ ಮುಂದಿನ ಮೂರು ದಿನಗಳ ಕಾಲ ಉತ್ತರ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾದರೂ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 20ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…