Advertisement
ವೆದರ್ ಮಿರರ್

ಹವಾಮಾನ ವರದಿ | 13-10-2024 | ಸಾಮಾನ್ಯ ಮಳೆ | ಅ.14 ರಿಂದ ಮಳೆ ಜಾಸ್ತಿಯಾಗುವ ಸಾಧ್ಯತೆ | ಅ.16 ಭಾರೀ ಮಳೆ ನಿರೀಕ್ಷೆ |

Share

14.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗಳ ಪರಿಣಾಮ ಅಕ್ಟೊಬರ್ 14 ರಿಂದ ಮಳೆ ಜಾಸ್ತಿಯಾಗುವ ಲಕ್ಷಣಗಳಿದ್ದು, ಅಕ್ಟೊಬರ್ 16,17 ರಂದು ಭಾರಿ ಮಳೆಯ ಮುನ್ಸೂಚೆನೆ ಇದೆ.  (ವಾಯುಭಾರ ಕುಸಿತ ಹಾದು ಹೋಗಲಿರುವುದರಿಂದ).

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಅಕ್ಟೊಬರ್ 17ರಂದು ದಕ್ಷಿಣ ಕರ್ನಾಟಕದ ಮೂಲಕ ಹಾದುಹೋಗುವ ನಿರೀಕ್ಷೆ ಇದ್ದು, ಅತಿ ಭಾರಿ ಮಳೆಯ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ, ರಾಯಚೂರು, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ದಕ್ಷಿಣ ಒಳನಾಡಿನ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದರೆ, ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸಹಿತ), ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಅಕ್ಟೊಬರ್ 17ರಂದು ಓಮನ್ ಕರಾವಳಿಗೆ ತಲಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಅಕ್ಟೊಬರ್ 16,17 ಹಾಗೂ 18 ರಂದು ಆಂದ್ರಾ ಕರಾವಳಿ ಮೂಲಕ ಪ್ರವೇಶಿಸಿ, ದಕ್ಷಿಣ ಕರ್ನಾಟಕದ ಮೂಲಕ ಅರಬ್ಬಿ ಸಮುದ್ರ ಸೇರುವ ನಿರೀಕ್ಷೆ ಇದೆ. ಇದರಿಂದ ಗಾಳಿಯೊಂದಿಗೆ ಅತಿ ಭಾರಿ ಮಳೆಯ ಮುನ್ಸೂಚನೆ ಇದೆ. (ಪಥ ಬದಲಾದರೆ ಮಳೆಯ ಪ್ರಮಾಣ ಬದಲಾಗಬಹುದು).

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

8 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago