19.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ
ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ ಹಾಗೂ ಸಂಜೆ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆ (ಪಶ್ಚಿಮದ ಮೋಡದಿಂದ) ಮತ್ತು ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ (ಪೂರ್ವದ ಮೋಡದಿಂದ) ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 25ರಿಂದ ಮಳೆಯ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಒಂದೆರಡು ಭಾಗಗಳಲ್ಲಿ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಯಲು ಸೀಮೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಅಕ್ಟೊಬರ್ 25ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಒಳನಾಡು : ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ ಇದ್ದರೆ, ಗದಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ (ಗುಂಡ್ಲುಪೇಟೆ ಭಾಗಗಳಲ್ಲಿ) ಮೋಡ ಅಥವಾ ಅಲ್ಲಲ್ಲಿ ತುಂತುರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸ್ವಲ್ಪ ಜಾಸ್ತಿ ಇರಬಹುದು), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಅಕ್ಟೊಬರ್ 24ರಿಂದ ಹಾಗೂ ದಕ್ಷಿಣ ಒಳನಾಡುಗಳಲ್ಲಿ ಭಾಗಗಳಲ್ಲಿ ಅಕ್ಟೊಬರ್ 25ರಿಂದ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಈಗ ಉತ್ತರಕ್ಕೆ ಚಲಿಸಿದ್ದು, ಇನ್ನು ಪಶ್ಚಿಮಾಭಿಮುಖವಾಗಿ ಚಲಿಸಿ ಅಕ್ಟೊಬರ್ 22 ರಂದು ಯಮನ್ ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಅಕ್ಟೊಬರ್ 20ರಂದು ಬಂಗಾಳಕೊಲ್ಲಿಯ ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ ಅಕ್ಟೊಬರ್ 23ರ ನಂತರ ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಉತ್ತರಕ್ಕೆ ಚಲಿಸಿ ಪ್ರಭಲಗೊಂಡರೆ ಹಿಂಗಾರು ಮಾರುತಗಳು ತುಂಬಾ ದುರ್ಬಲಗೊಳ್ಳಲಿವೆ.
ಅಡಿಕೆಯ ಮೇಲೆ ಕ್ಯಾನ್ಸರ್‌ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು…
ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು…
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…