10.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಕಡಲ ತೀರ ಭಾಗದ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 13ರಿಂದ 18ರ ತನಕ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ನವೆಂಬರ್ 13ರಿಂದ ಹಿಂಗಾರು ಚುರುಕಾಗಿ ಮಳೆಯ ಮುನ್ಸೂಚನೆ ಇದೆ.
ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ನವೆಂಬರ್ 13ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಾಗೂ 14ರಿಂದ ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಚುರುಕಾಗುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ತಿರುಗುವಿಕೆಯು ನವೆಂಬರ್ 12 ಅಥವಾ 13ರಂದು ಶಿಥಿಲಗೊಳ್ಳುವ ಸಾಧ್ಯತೆಗಳಿದ್ದು, ಬಳಿಕ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.
ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್ಪ್ರೆಸ್ವೇ (ಹೈ-ಸ್ಪೀಡ್ ಕಾರಿಡಾರ್) ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ರಸ್ತೆ ಸಾರಿಗೆ…
ಈ ಬಾರಿ ಅಡಿಕೆ ಮಾರುಕಟ್ಟೆ ಏರಿಕೆ ಕಾಣುವ ನಿರೀಕ್ಷೆ ಇದೆ. ಆದರೆ ಬೆಳೆಗಾರರ…
ನವೆಂಬರ್ 18ರ ತನಕ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ.…
ರಬ್ಬರ್ ಬೆಲೆ ಕುಸಿತದಿಂದಾಗಿ ಭಾರತದಲ್ಲಿ ಬೆಳೆಗಾರರು ಬಳಲುತ್ತಿರುವಾಗ, ರಬ್ಬರ್ ಆಮದು ಏಪ್ರಿಲ್ ಮತ್ತು…
ತುಂಗಾಭದ್ರಾ ನದಿಗಳ ರಕ್ಷಣೆಗೆ ಹಮ್ಮಿಕೊಂಡಿರುವ ಅಭಿಯಾನ ಶ್ಲಾಘನೀಯ ಎಂದು ಕೂಡ್ಲಿ ಶೃಂಗೇರಿ ಮಠದ…
ಕೇಂದ್ರ ಸರ್ಕಾರ ರೈತರ ಮತ್ತು ಬಡವರ ಹಿತ ಕಾಯಲು ಬದ್ಧವಾಗಿದೆ ಎಂದು ಕೇಂದ್ರ…