04.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉತ್ತರ ಕನ್ನಡ ಉತ್ತಮ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಜಾಸ್ತಿಯೇ ಇರಬಹುದು.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ ಜಿಲ್ಲಾಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ, ಬಿಸಿಲು ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು ಮಾರುತಗಳು ಸಾಮಾನ್ಯವಾಗಿ ಆಸ್ಟ್ರೇಲಿಯಾ ಪಶ್ಚಿಮ ಕರಾವಳಿಯಿಂದ ಹಿಂದೂಮಹಾಸಾಗರದ ಮೂಲಕ ಅರಬ್ಬಿ ಸಮುದ್ರ ಸೇರುವುದು ವಾಡಿಕೆ. ಆದರೆ ಈಗಿನ ಸ್ಥಿತಿ ಗಮನಿಸಿದರೆ ದಕ್ಷಿಣ ದ್ರುವ ಕಡೆಯಿಂದ ಮಡಗಾಸ್ಕರ್ ಕರಾವಳಿ ಮೂಲಕ ಅರಬ್ಬಿ ಸಮುದ್ರಕ್ಕೆ ಸೇರುತ್ತಿದೆ. ಮುಂಗಾರು ಲಯ ತಪ್ಪುತ್ತಿರುವಂತೆ ತೋರುತ್ತಿದೆ.
ಈಗಿನಂತೆ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಎರಡು ದಿನಗಳ ಕಾಲ ಮುಂದಕ್ಕೆ ಹೋಗಿ ಜುಲೈ 6 ರಿಂದ ಮಳೆಯ ಮುನ್ಸೂಚನೆ ಇದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಈಗಿನ ಗುಡುಗು ಸ್ಥಳೀಯ ಮೋಡಗಳ ಸೇರುವಿಕೆಯಿಂದಲೂ ಸಾಧ್ಯತೆ ಇದೆ.