6.9.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಕೊಡಗು ಜಿಲ್ಲೆಗಳ ಹೆಚ್ಚಿನ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿಯ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಢ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಸೆ.7ರಂದು ಒಡಿಸ್ಸಾ ಕರಾವಳಿ ಮೂಲಕ ಪ್ರವೇಶಿಸಿ ಮಧ್ಯ ಪ್ರದೇಶದವರೆಗೂ ಚಲಿಸುವ ಮುನ್ಸೂಚನೆ ಇದೆ. ಪರಿಣಾಮವಾಗಿ ಮುಂಗಾರು ಚುರುಕುಗೊಂಡು ಉತ್ತರ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗುಜರಾತ್ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕರ್ನಾಟಕದ ಕರಾವಳಿ ಹಾಗೂ ಕೇರಳ ಕರಾವಳಿ ಭಾಗಗಳಲ್ಲಿ ಸೆ.8 ರವರೆಗೆ ಉತ್ತಮ ಮಳೆ ಇದ್ದರೂ ಆಮೇಲೆ ಕಡಿಮೆ ಆಗುವ ಮುನ್ಸೂಚನೆ ಇದೆ.