12.9.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ.
ಕೊಡಗಿನ ಒಂದೆರಡು ಭಾಗಗಳಲ್ಲಿ, ಮಂಡ್ಯ, ಬೆಂಗಳೂರು, ಗುಬ್ಬಿ, ತಿಪಟೂರು ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣದ ಮುನ್ಸೂಚನೆ ಇದೆ.
#weather #weathermirror @saishekharbb pic.twitter.com/NxfvQfMUAQ
Advertisement— theruralmirror (@ruralmirror) September 11, 2021
ಮುಂಗಾರು : ಬಂಗಾಳಕೂಲ್ಲಿಯ ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಸೆ. 16 ರವರೆಗೆ ಕಾಸರಗೋಡು ಹಾಗೂ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಮಲೆನಾಡು ಭಾಗಗಳ ಒಂದೆರಡು ಪ್ರದೇಶಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ. ಉತ್ತರ ಹಾಗೂ ದಕ್ಷಿಣ ಒಳನಾಡುಗಳಲ್ಲಿ ವಾಯುಭಾರ ಕುಸಿತವು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಇದೆ.