14.9.2021 ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಕರ್ನಾಟಕದ ಬಾಗಲಕೋಟೆ, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
#WeatherUpdate @saishekharbb pic.twitter.com/CcLCk1Pr10
— theruralmirror (@ruralmirror) September 13, 2021
ಮುಂಗಾರು : ಗುಜರಾತ್ ಹಾಗೂ ಒಡಿಸ್ಸಾ ರಾಜ್ಯಗಳಲ್ಲಿ ವಾಯುಭಾರ ಕುಸಿತ ಇನ್ನೂ ಸಂಪೂರ್ಣವಾಗಿ ಶಿಥಿಲಗೊಳ್ಳದಿರುವುದರಿಂದ ಸೆಪ್ಟೆಂಬರ್ 15ರ ವರೆಗೆ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.