28.9.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲಾ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ರಾಮನಗರ, ಮಂಡ್ಯ, ತುಮಕೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಪಾವಗಢ, ದಾವಣಗೆರೆ, ಶಿವಮೊಗ್ಗ, ಹಾವೇರಿ ಜಿಲ್ಲಾ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಚಿತ್ರದುರ್ಗ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಗುಲಾಬ್ ಚಂಡಮಾರುತ : ಈಗಾಗಲೇ ಆಂದ್ರಾದಲ್ಲಿ ಅನಾಹುತ ಸೃಷ್ಟಿಸಿರುವ ಚಂಡಮಾರುತವು ಮಹಾರಾಷ್ಟ್ರ ಮತ್ತು ಗುಜರಾತ್ ಮೂಲಕ ಸಾಗಿ ಸೆ. 30 ರಂದು ಬೆಳಿಗ್ಗೆ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುತ್ತಿದ್ದಂತೆ ಬಲಗೊಳ್ಳುವ ಮುನ್ಸೂಚನೆ ಇದೆ. ಅದೇ ಸಮಯದಲ್ಲಿ ತಮಿಳುನಾಡು ಕರಾವಳಿಗೆ ನೇರವಾಗಿ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಂತಹ ತಿರುಗುವಿಕೆ (Cyclonic Circulation) ಉಂಟಾಗಲಿದೆ. ಇದರ ಪರಿಣಾಮವಾಗಿ ಅ.1ರಿಂದ ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.