18.10.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು, ಬಂಟ್ವಾಳ ಹಾಗೂ ಮಂಗಳೂರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಡುಪಿಯ ದಕ್ಷಿಣ ಭಾಗದಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕೊಡಗಿನ ವಿರಾಜಪೇಟೆ, ಭಾಗಮಂಡಲ ಸುತ್ತಮುತ್ತ, ಮೈಸೂರು ಉತ್ತರ, ಮಂಡ್ಯ, ರಾಮನಗರ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ದಕ್ಷಿಣ, ದಾವಣಗೆರೆ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಮಹಾರಾಷ್ಟ್ರದ ಮಧ್ಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.
ಆದರೆ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಆದರೂ ಉತ್ತರ ಕರ್ನಾಟಕದ ನದಿಗಳ ನೀರಿನ ಮಟ್ಟ ಸ್ವಲ್ಪ ಏರಿಕೆಯಾಗಬಹುದು.Advertisement