9.1.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ಹೆಚ್ಚಿನ ಭಾಗಗಳಲ್ಲಿ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂನೆ ಇದೆ. ಉಡುಪಿ, ಕಾಸರಗೋಡು ಭಾಗಗಳಲ್ಲಿ ಸಹ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಅವಧಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಮೈಸೂರು (ಉತ್ತಮ ಮಳೆಯ ಸಾಧ್ಯತೆ ಇದೆ), ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶಿಥಿಲಗೊಳ್ಳದಿದ್ದರೂ ಪ್ರಭಾವು ಕ್ಷೀಣಿಸುತ್ತದೆ.
ಆದರೆ ಬಂಗಾಳಕೊಲ್ಲಿಯಲ್ಲಿಉಂಟಾಗಲಿರುವ ಚಂಡಮಾರುತವು ಈಗಾಗಲೇ ನಿಕೋಬಾರ ದಕ್ಷಿಣ ತುದಿಯಲ್ಲಿ ತಿರುಗಲು ಆರಂಭಿಸಿದೆ.
ಇದರ ಪರಿಣಾಮದಿಂದ ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕರ್ನಾಟಕದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಹ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.