10.11.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಸಂಜೆ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಮತ್ತು ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಏಕ ಕಾಲದಲ್ಲಿ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಅಪರೂಪದ ವಿದ್ಯಮಾನ ಗೋಚರಿಸುತ್ತಿದೆ.
#Cyclone #ಚಂಡಮಾರುತ #ಮಳೆ #weathermirror @saishekharbb pic.twitter.com/bdzYb05S7h
Advertisement— theruralmirror (@ruralmirror) November 9, 2021
ನವೆಂಬರ್ 11 ರಂದು ಬಂಗಾಳಕೂಲ್ಲಿಯ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದ್ದು. ತಮಿಳುನಾಡು ಹೆಚ್ಚಿನ ಭಾಗಗಳಲ್ಲಿ ರೆಡ್ ಎಲರ್ಟ್ ಕಾಣಿಸುತ್ತಿದೆ. ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ 2 ದಿವಸಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.