13.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಒಂದೆರಡು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆಯೂ ಇದೆ.
ಉತ್ತರ ಕನ್ನಡ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮುನ್ಸೂಚನೆ ಇದೆ.
ಈಗಾಗಲೆ ಮ್ಯಾನ್ಮಾರ್( ಬರ್ಮಾ) ಕರಾವಳಿಯಲ್ಲಿ ವಾಯುಭಾರ ಕುಸಿತ ಆರಂಭಿಕ ಹಂತದಲ್ಲಿದ್ದು ನವೆಂಬರ್ 14ರಂದು ಅಂಡಮಾನ್ ದ್ವೀಪ ಸಮೂಹಗಳನ್ನು ದಾಟಿ ಬಂಗಾಳಕೂಲ್ಲಿಗೆ ಪ್ರವೇಶಿಸಲಿದೆ.
#Rains #ಮಳೆ #weathermirror #weather @saishekharbb pic.twitter.com/T4YuFz0oEO
Advertisement— theruralmirror (@ruralmirror) November 12, 2021
ಈಗಿನ ಮುನ್ಸೂಚನೆಯಂತೆ ನಾಳೆ ಅಂದರೆ 13.11.21 ರಿಂದ 16.11.21ರ ವರೆಗೆ ಕರಾವಳಿ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಉತ್ತಮ ಮಳೆಯ ಮುನ್ಸೂಚನೆ ಇದೆ.