14.11.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಬೀದರ್, ಯಾದಗಿರಿ, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಾಗಲೇ ಬಂಗಾಳಕೂಲ್ಲಿಯಲ್ಲಿ ವಾಯುಭಾರ ಕುಸಿತ ಪ್ರಕ್ರಿಯೆ ಆರಂಭವಾಗಿದ್ದು, ಈಗಿನಂತೆ ನವೆಂಬರ್ 17 ರಂದು ಅರಬ್ಬಿ ಸಮುದ್ರದಲ್ಲಿಯೂ ವಾಯುಭಾರ ಕುಸಿತದ ಲಕ್ಷಣಗಳಿವೆ. ಎರಡೂ ಸಮುದ್ರಗಳಲ್ಲಿ ಏಕ ಕಾಲದಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ.
#weather #WeatherReport #weathermirror #ಹವಾಮಾನ @saishekharbb pic.twitter.com/5vosjdxtfC
— theruralmirror (@ruralmirror) November 13, 2021