18.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮಹಾರಾಷ್ಟ್ರ ಕರಾವಳಿಗೆ ತಲುಪಿದ್ದು ರಾಜ್ಯದ ಮೇಲೆ ಪ್ರಭಾವ ಕಡಿಮೆಯಾಗುತ್ತಿದೆ.
ಬಂಗಾಳಕೊಲ್ಲಿಯಲ್ಲಿಯ ವಾಯುಭಾರ ಕುಸಿತವು ಸ್ವಲ್ಪ ಪ್ರಬಲಗೊಂಡು ನಾಳೆ ಅಂದರೆ 19ನೇ ತಾರೀಕಿನ ರಾತ್ರಿ ಅಥವಾ 20ರ ಮುಂಜಾನೆ ಆಂದ್ರ ಕರಾವಳಿ ತಲುಪಲಿದೆ. ಬಳ್ಳಾರಿ ಹಾಗೂ ರಾಯಚೂರು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…