20.11.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕೊಡಗು, ಆಗುಂಬೆ ಹಾಗೂ ಹೊಸನಗರ, ಸಾಗರ, ಸಿದ್ದಾಪುರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಜಿಲ್ಲೆಯಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತದ ಮಳೆ ಪ್ರಭಾವ ಕಡಿಮೆಯಾಗಿ ಹಿಂಗಾರು ಮಳೆ ನ.23 ವರೆಗೆ ಮುಂದುವರಿಯುವ ಮುನ್ಸೂಚನೆ. #ಹವಾಮಾನ #weather #weathermirror #WeatherUpdate pic.twitter.com/ydZ9dKhCG7
— theruralmirror (@ruralmirror) November 19, 2021
Advertisement
ಮೈಸೂರು, ಹಾಸನ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬಾಗಲಕೋಟೆ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮಂಡ್ಯ, ರಾಮನಗರ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತದ ಮಳೆ ಕಡಿಮೆ ಆಗಿ ಈಗ ಹಿಂಗಾರು ಮಳೆ ನವೆಂಬರ್ 23ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.