21.11.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡದ ಪುತ್ತೂರು, ಬಂಟ್ವಾಳ, ಮಂಗಳೂರು, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ, ಬೆಳ್ತಂಗಡಿ ಭಾಗಗಳಲ್ಲಿ ಮಳೆ ಸ್ವಲ್ಪ ಕಡಿಮೆ ಇರಬಹುದು. ಕಾಸರಗೋಡು ಜಿಲ್ಲೆಯಾದ್ಯಂತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ (ಗುಂಡ್ಲುಪೇಟೆ ಸುತ್ತಮುತ್ತ ತುಂತುರು ಮಾತ್ರ ಇರಬಹುದು), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ(ಭಾರಿ ಮಳೆ), ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಒಂದೆರಡು ಕಡೆ ಸಾಧಾರಣ ಮಳೆಯ ಸಾಧ್ಯತೆಯೂ ಇದೆ.
ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಇನ್ನೂ ಮುಂದುವರಿದಿದ್ದು ಕೇರಳ ಹಾಗೂ ದಕ್ಷಿಣ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮುಂಗಾರಿನ ವಾತಾವರಣ ಸೃಷ್ಟಿಸಿದೆ.
ಆದರೆ ಈ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು ನಾಳೆಯಿಂದ ಈ ವಾತಾವರಣ ಬದಲಾಗಬಹುದು. ಆದರೂ ಈಗಿನ ಮಳೆಯ ವಾತಾವರಣವು ನವೆಂಬರ್ 23ರ ತನಕ ಮುಂದುವರಿಯುವ ಮುನ್ಸೂಚನೆ ಇದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…