22.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡದ, ಮಂಗಳೂರು, ಬಂಟ್ವಾಳ, ಪುತ್ತೂರು, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಜಿಲ್ಲೆಯಾದ್ಯಂತ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ನಿನ್ನೆ ಇದ್ದ ಮುಂಗಾರಿನಂತಹ ವಾತಾವರಣ ಬದಲಾಗಿ ಮೋಡದ ಚಲನೆಯು ದಕ್ಷಿಣದಿಂದ ಉತ್ತರಾಭಿಮುಖವಾಗಿರುವುದರಿಂದ ಭಾರಿ ಮಳೆಯ ಆತಂಕ ದೂರವಾಗಿದೆ.
ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಇನ್ನೆರಡು ದಿನಗಳಲ್ಲಿ ಹೆಚ್ಚಿನ ಅವಧಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದ್ದರೂ, ದಕ್ಷಿಣ ಕರ್ನಾಟಕದ ಕೊಡಗು, ಆಗುಂಬೆ, ಮೈಸೂರು, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ನವೆಂಬರ್ 30ರ ತನಕವೂ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…