23.11.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡದ ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಕೆಲವು ಭಾಗಗಳಲ್ಲಿ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ಈಗಿನ ಪ್ರಕಾರ ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, 25 ಅಥವಾ 26ರಂದು ತಮಿಳುನಾಡು ಕರಾವಳಿಗೆ ತಲಪುವ ಮುನ್ಸೂಚನೆ ಇದೆ. ಆದರೆ ಅಷ್ಟೇನು ಪ್ರಭಲವಾಗಿಲ್ಲದಿದ್ದರೂ ಮಳೆಯ ಮುನ್ಸೂಚನೆ ಇದೆ.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.