01.12.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಹೆಚ್ಚಿನ ಅವಧಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಆಗುಂಬೆ, ಶಿೃಂಗೇರಿ, ಹೊಸನಗರ, ಸಾಗರ, ಮುಂಡುಗೋಡ, ಕೊಡಗು ಹಾಗೂ ರಾಯಚೂರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಮೋಡದ ವಾತಾವರಣ ಇರಬಹುದು.
ಈಗಾಗಲೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, ಡಿಸೆಂಬರ್ 1ರ ಸಂಜೆ ಮಹಾರಾಷ್ಟ್ರದ ಮುಂಬೈ ಕರಾವಳಿ ತಲುಪಲಿದೆ. ಅಲ್ಲಿ ಪ್ರಭಲಗೊಂಡು, ಉತ್ತರ ಮಹಾರಾಷ್ಟ್ರ ಭಾರಿ ಮಳೆಯ ಮುನ್ಸೂಚನೆ ಇದೆ.
ಇಂದು ಮತ್ತು ನಾಳೆ ದಕ್ಷಿಣ ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾದಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ ಹಾಗೂ ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಿದೆ ಮತ್ತು ತಮಿಳುನಾಡು ಕರಾವಳಿ ಮತ್ತು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಈಶಾನ್ಯ ಮಾರುತಗಳು ಅಪ್ಪಳಿಸಲಿವೆ.
ಮುಂದಿನ 4 ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಇಂದು ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಬಹುದು.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…