Advertisement
ವೆದರ್ ಮಿರರ್

ವೆದರ್‌ ಮಿರರ್‌ :30-11-2021 | ಮತ್ತೆ ಮಳೆ ಸೂಚನೆ | ಅರಬೀಸಮುದ್ರದಲ್ಲಿ ವಾಯುಭಾರ ಕುಸಿತದ ಲಕ್ಷಣ | ಡಿಸೆಂಬರ್‌ ಮೊದಲ ವಾರದಲ್ಲೂ ಮಳೆ ಸಾಧ್ಯತೆ |

Share

01.12.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಹೆಚ್ಚಿನ ಅವಧಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಆಗುಂಬೆ, ಶಿೃಂಗೇರಿ, ಹೊಸನಗರ, ಸಾಗರ, ಮುಂಡುಗೋಡ, ಕೊಡಗು ಹಾಗೂ ರಾಯಚೂರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ ಮೋಡದ ವಾತಾವರಣ ಇರಬಹುದು.

ವಾಯುಭಾರ ಕುಸಿತ.....

ಈಗಾಗಲೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಆರಂಭವಾಗಿದ್ದು, ಡಿಸೆಂಬರ್ 1ರ ಸಂಜೆ ಮಹಾರಾಷ್ಟ್ರದ ಮುಂಬೈ ಕರಾವಳಿ ತಲುಪಲಿದೆ. ಅಲ್ಲಿ ಪ್ರಭಲಗೊಂಡು, ಉತ್ತರ ಮಹಾರಾಷ್ಟ್ರ ಭಾರಿ ಮಳೆಯ ಮುನ್ಸೂಚನೆ ಇದೆ.

ಇಂದು ಮತ್ತು ನಾಳೆ ದಕ್ಷಿಣ ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾದಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ ಹಾಗೂ ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಿದೆ ಮತ್ತು ತಮಿಳುನಾಡು ಕರಾವಳಿ ಮತ್ತು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಈಶಾನ್ಯ ಮಾರುತಗಳು ಅಪ್ಪಳಿಸಲಿವೆ.

ಮುಂದಿನ 4 ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಇಂದು ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಬಹುದು. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

2 days ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

2 days ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

2 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago