04.12.2021ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಹೆಚ್ಚಿನ ಅವಧಿ ಬಿಸಿಲು ಆಗಾಗ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ. ಇನ್ನು ಈಗಿನ ಪ್ರಕಾರ ಸದ್ಯಕ್ಕೆ ಮಳೆಯ ಮುನ್ಸೂಚನೆ ಇರುವುದಿಲ್ಲ.
ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ಗದಗ, ವಿಜಾಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಪಾವಗಢ, ರಾಯಚೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ನಡುವೆ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇದ್ದು ಸಂಜೆ ಸ್ವಲ್ಪ ಮೋಡ ಕವಿಯಬಹುದು.
ಬಂಗಾಳಕೂಲ್ಲಿಯ ಚಂಡಮಾರುತವು ಇಂದು ಉತ್ತರ ಆಂದ್ರಾ ಕರಾವಳಿ ತಲುಪಿ ಒಡಿಸ್ಸಾ ಕರಾವಳಿ ಮೂಲಕ ಮುಂದೆ ಸಾಗಲಿದೆ. ಚಂಡಮಾರುತವು ಮುಂದೆ ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾ ಕಡೆ ಚಲಿಸುತ್ತಿದ್ದಂತೆಯೇ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆ ಕಡಿಮೆಯಾಗಿ ಒಣ ಹವೆ ಮುಂದುವರಿಯಲಿದೆ.
#weather #WeatherReport pic.twitter.com/RnmUSiNMRg
Advertisement— theruralmirror (@ruralmirror) December 3, 2021