ಹೆಚ್ಚುತ್ತಿರುವ ಚಳಿ ಗಾಳಿ | ರಾಜ್ಯದಲ್ಲಿ ಎರಡು ದಿನ ವಿಪರೀತ ಚಳಿ ನಿರೀಕ್ಷೆ | ಡಿ.31 ರಿಂದ ಕರಾವಳಿ ಜಿಲ್ಲೆಗಳಲ್ಲಿ ಮೋಡ |

December 30, 2021
2:15 PM

31.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಒಣಹವೆ ಮುಂದುವರಿಯಲಿದೆ.

ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಅಂದರೆ ಡಿಸೆಂಬರ್ 31ರಿಂದ ಜನವರಿ 3ರ ತನಕ ಕರಾವಳಿಯ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.

ಹೆಚ್ಚಾಗಲಿದೆ ಚಳಿ |

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಚಳಿ ವಾತಾವರಣ ಮುಂದುವರೆದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಬೆಳಗ್ಗೆ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣವಾಗಿದೆ.

ವಾಯುವ್ಯ ಬಯಲು ಪ್ರದೇಶಗಳಲ್ಲಿ, ವಿಶೇಷವಾಗಿ ಪಂಜಾಬ್, ಹರಿಯಾಣ ಮತ್ತು ಚಂಡೀಗಢದ ಕೆಲವು ಭಾಗಗಳಲ್ಲಿ ಇಂದಿನಿಂದ ಜನವರಿ 2 ರ ಭಾನುವಾರದವರೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮಾಹಿತಿಯನ್ನು ನೀಡಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೆರಡು ದಿನ ಚಳಿ ಹೆಚ್ಚಾಗಲಿದ್ದು, ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಮೈಸೂರು, ಉತ್ತರ ಕರ್ನಾಟಕದಲ್ಲಿ ಜನವರಿ 1 ರ ಬಳಿಕ ಕರ್ನಾಟಕದಲ್ಲಿ ಶೀತ ಗಾಳಿ ಕಡಿಮೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್‌ನ ಇಳಿಕೆಯಿಂದಾಗಿ ಈ ಶೀತ ಪರಿಸ್ಥಿತಿಗಳು ಉಂಟಾಗುತ್ತದೆ .

ದೆಹಲಿ, ಪಂಜಾಬ್, ರಾಜಸ್ತಾನ, ಚಂಡೀಗಢ, ಹರಿಯಾಣ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತಿಸ್‌ಗಢದಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ.

ಮಾತ್ರವಲ್ಲದೆ, ಈ ರಾಜ್ಯಗಳಲ್ಲಿ ಡಿಸೆಂಬರ್ 31 ರಿಂದ ಜನವರಿ 2 ರವರೆಗೆ ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror