31.12.21ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚೆನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಒಣಹವೆ ಮುಂದುವರಿಯಲಿದೆ.
ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಅಂದರೆ ಡಿಸೆಂಬರ್ 31ರಿಂದ ಜನವರಿ 3ರ ತನಕ ಕರಾವಳಿಯ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಚಳಿ ವಾತಾವರಣ ಮುಂದುವರೆದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಬೆಳಗ್ಗೆ ದಟ್ಟ ಮಂಜು ಕವಿದ ವಾತಾವರಣ ನಿರ್ಮಾಣವಾಗಿದೆ.
ವಾಯುವ್ಯ ಬಯಲು ಪ್ರದೇಶಗಳಲ್ಲಿ, ವಿಶೇಷವಾಗಿ ಪಂಜಾಬ್, ಹರಿಯಾಣ ಮತ್ತು ಚಂಡೀಗಢದ ಕೆಲವು ಭಾಗಗಳಲ್ಲಿ ಇಂದಿನಿಂದ ಜನವರಿ 2 ರ ಭಾನುವಾರದವರೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮಾಹಿತಿಯನ್ನು ನೀಡಿದೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇನ್ನೆರಡು ದಿನ ಚಳಿ ಹೆಚ್ಚಾಗಲಿದ್ದು, ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಮೈಸೂರು, ಉತ್ತರ ಕರ್ನಾಟಕದಲ್ಲಿ ಜನವರಿ 1 ರ ಬಳಿಕ ಕರ್ನಾಟಕದಲ್ಲಿ ಶೀತ ಗಾಳಿ ಕಡಿಮೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್‌ನ ಇಳಿಕೆಯಿಂದಾಗಿ ಈ ಶೀತ ಪರಿಸ್ಥಿತಿಗಳು ಉಂಟಾಗುತ್ತದೆ .
ದೆಹಲಿ, ಪಂಜಾಬ್, ರಾಜಸ್ತಾನ, ಚಂಡೀಗಢ, ಹರಿಯಾಣ, ಪೂರ್ವ ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತಿಸ್‌ಗಢದಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ.
ಮಾತ್ರವಲ್ಲದೆ, ಈ ರಾಜ್ಯಗಳಲ್ಲಿ ಡಿಸೆಂಬರ್ 31 ರಿಂದ ಜನವರಿ 2 ರವರೆಗೆ ಶೀತ ಗಾಳಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…