ವೆದರ್‌ ಮಿರರ್‌ :14-02-2022 | ಭಾನುವಾರ ಕೆಲವು ಕಡೆ ತುಂತುರು ಮಳೆ | ಸೋಮವಾರವೂ ತುಂತುರು ಮಳೆ ಸಾಧ್ಯತೆ |

February 14, 2022
11:13 AM

ಭಾನುವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಹವಲು ಕಡೆಗಳಲ್ಲಿ ತುಂತುರು ಮಳೆಯಾಗಿದೆ. ಸುಬ್ರಹ್ಮಣ್ಯ ಸೇರಿದಂತೆ ಆಸುಪಾಸಿನ ಭಾಗಗಳಲ್ಲಿ ಸುಮಾರು  2 ಮಿಮೀ ಮಳೆಯಾಗಿದೆ. ಸೋಮವಾರವೂ ಮಳೆಯಾಗುವ ಸಾಧ್ಯತೆ ಇದೆ.

15.02.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಹವಾಮಾನ ವರದಿ

ಕೊಡಗು, ಮೈಸೂರು, ಮಂಡ್ಯ, ಆಗುಂಬೆ, ಬೆಂಗಳೂರು ಹಾಗೂ ಕೋಲಾರ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ನಿನ್ನೆ ದಕ್ಷಿಣ ಕನ್ನಡದ ಒಂದೆರಡು ಭಾಗಗಳಲ್ಲಿ ಹಾಗೂ ಸಕಲೇಶಪುರ ಸುತ್ತಮುತ್ತ ಒಂದೆರಡು ಭಾಗಗಳಲ್ಲಿ ಅನಿರೀಕ್ಷಿತ ಸಾಧಾರಣ ಮಳೆಯಾದ ವರದಿಯಾಗಿದೆ.

ಇವತ್ತು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಬಂಗಾಳಕೂಲ್ಲಿಯ ವಾಯುಭಾರ ಕುಸಿತದಂತಹ ತಿರುಗುವಿಕೆ ಅಷ್ಟೇನು ಪ್ರಭಾವಿತವಾಗುವ ಸಾಧ್ಯತೆ ಕಡಿಮೆ ಇರುವುದರಿಂದ ನಿರೀಕ್ಷಿತ ಮಟ್ಟದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 13-11-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಅಕ್ವಾನ್ ಚಂಡಮಾರುತದ ಪಥ ನಿಗೂಢ
November 13, 2026
3:58 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-11-2026 | ನ.15–16 ರಂದು ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆ ಸಾಧ್ಯತೆ
November 12, 2026
2:00 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-11-2026 | ‘ಅಕ್ವಾನ್’ ಚಂಡಮಾರುತದ ಪಥ ಇನ್ನೂ ನಿಗೂಢ – ನ.14ರಂದು ಸ್ಪಷ್ಟತೆ?
November 11, 2026
10:45 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-11-2026 | ನ.14–15ರಂದು ಚಂಡಮಾರುತವಾಗಿ ಬದಲಾಗುವ ಸಾಧ್ಯತೆ
November 10, 2026
2:51 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror