ವೆದರ್‌ ಮಿರರ್‌ | 5-3-2022 | ವಾಯುಭಾರ ಕುಸಿತ ಶಿಥಿಲಗೊಳ್ಳಲು ಪ್ರಾರಂಭ | ಕರಾವಳಿ ಜಿಲ್ಲೆಗಳಲ್ಲಿ ಮಾರ್ಚ್ 13 ರ ತನಕ ಮಳೆ ಸಾಧ್ಯತೆ |

March 5, 2022
10:40 AM

05.03.22ರ ವಾಯುಭಾರ ಕುಸಿತದ ಚಿತ್ರಣ ಹಾಗೂ ವರದಿ :

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನಾಳೆ ತಮಿಳುನಾಡಿನ ಚೆನೈ ತೀರಕ್ಕೆ ತಲುಪಲಿದೆ ಮತ್ತು ಶಿಥಿಲಗೊಳ್ಳಲು ಪ್ರಾರಂಭವಾಗಲಿದೆ. ಚೆನೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆ ಇದ್ದರೆ ಉಳಿದ ತಮಿಳುನಾಡು ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಈಗಿನ ಪ್ರಕಾರ ಮಾರ್ಚ್ 7 ರಂದು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ರಾಮನಗರ, ಮಂಡ್ಯ, ಚಾಮರಾಜನಗರ, ಹಾಸನ, ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಮಾರ್ಚ್ 8 ರಂದು ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ( ಗುಡುಗು ಸಹಿತ) ಮುನ್ಸೂಚನೆ ಇದೆ.

ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮಾರ್ಚ್ 13ರ ತನಕ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror