07.03.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ ಹೀಗಿದೆ :
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ದುರ್ಬಲಗೊಂಡಿದ್ದು, ಕರ್ನಾಟಕದಲ್ಲಿ ಈ ಕಾರಣಕ್ಕೆ ಯಾವುದೇ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಇನ್ನು ಬೆಸುಗೆ ಮಳೆಯ ನಿರೀಕ್ಷೆಯ ಕಾಲ.
ಈಗಿನ ಮುನ್ಸೂಚನೆಯಂತೆ ಕೊಡಗು, ಸಕಲೇಶಪುರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಸಂಜೆ ರಾತ್ರಿ ಹಗುರವಾಗಿ ಮೋಡ ಕವಿದ ವಾತಾವರಣ ಇರಬಹುದು.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ವಾಯುಭಾರ ಕುಸಿತ ಶ್ರೀಲಂಕಾ ಕರಾವಳಿಯ ಕಡೆಗೆ ಚಲಿಸಲಿದೆ. ಆದರೆ ತಮಿಳುನಾಡಿನಲ್ಲಿ ಮಾರ್ಚ್ 7ರ ತನಕ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ. ತಮಿಳುನಾಡು ಮಾತ್ರವಲ್ಲ ಪುದಚೇರಿ, ಕಾರೈಕಲ್‌ನಲ್ಲಿಯೂ ಸಾಧಾರಣೆ ಮಳೆಯಾಗಲಿದೆ.
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…
ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…
ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…