19.03.22 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗಿನ ಹೆಚ್ಚಿನ ಭಾಗಗಳಲ್ಲಿ ಸಂಜೆ ಉತ್ತಮ ಮಳೆಯ ಮುನ್ಸೂಚನೆ ಇದೆ. ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಹ ಸಂಜೆ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಕುಕ್ಕೆಸುಬ್ರಹ್ಮಣ್ಯ, ಕಡಬ, ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳ, ನಾರಾವಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ.
ಮೈಸೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಇದ್ದರೂ ಒಣ ಹವೆ ಮುಂದುವರಿಯಲಿದೆ. ಕಾಸರಗೋಡು ಹೊರತು ಪಡಿಸಿ ಕೆರಳದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ: ಈಗಾಗಲೇ ನಿಕೋಬಾರ್ ಪಶ್ಚಿಮ ಕರಾವಳಿಯಲ್ಲಿ ವಾಯುಭಾರ ಕುಸಿತದ ಆರಂಭಿಕ ಹಂತದಲ್ಲಿರುವ ‘ಅಸನಿ’ ಚಂಡಮಾರುತವು ಮಾರ್ಚ್ 23 ಅಥವಾ 24ರಂದು ಪಶ್ಚಿಮ ಬಂಗಾಳ, ಬಾಂಗ್ಲಾದೇಶ ಹಾಗೂ ಬರ್ಮಾ ಕರಾವಳಿ ಭಾಗಕ್ಕೆ ತಲುಪಲಿದೆ.