15 -04-2022 ರ ಬೆಳಗ್ಗೆ 8 ಗಂಟೆವರೆಗಿನ ಹವಾಮಾನ ವರದಿ:
ಕೊಡಗು ಅಲ್ಲಲ್ಲಿ, ಆಗುಂಬೆ ಸುತ್ತಮುತ್ತ, ತುಮಕೂರು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ಅರಬ್ಬಿ ಸಮುದ್ರದ ಕೇರಳ ಕರಾವಳಿ ಹತ್ತಿರ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದೆ. ಇದರ ಪ್ರಭಾವದಿಂದ ಕರಾವಳಿಯಾದ್ಯಂತ ಇನ್ನೂ 2 ರಿಂದ 3 ದಿವಸಗಳ ಮಟ್ಟಿಗೆ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ…
ಕನ್ನಡ ಭಾಷೆಯ ಅನೇಕ ಪದಗಳು ಸಂಸ್ಕೃತ ಮೂಲದ್ದಾಗಿವೆ. ಕನ್ನಡ ನಾಡಿನ ಊರಿನ ಹೆಸರುಗಳೂ…
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆಯು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಈ ಜೀವ ವೈವಿಧ್ಯತೆಯನ್ನು…
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಸೇರಿ ಮಲೆನಾಡು ಭಾಗದಲ್ಲಿ ಉಂಟಾಗುತ್ತಿರುವ ಕಾಡಾನೆಗಳ…
ತುಮಕೂರಿನಲ್ಲಿ ಸ್ವದೇಶಿ ಜಾಗರಣ ಮಂಚ್ ಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಕೇಂದ್ರ ಜಲಶಕ್ತಿ ಹಾಗೂ…
ಶ್ರೀಲಂಕಾ ಬಳಿಯ ತಿರುವಿಕೆಯ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ…