02.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:
ಕೊಡಗು ಉತ್ತಮ, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಆಗುಂಬೆ , ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಒಂದೆರಡು ಭಾಗಗಳಲ್ಲಿ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಾಗಲೇ ಈ ಹಿಂದೆ ತಿಳಿಸಿದಂತೆ ಗಾಳಿಯು ಅರಬ್ಬಿ ಸಮುದ್ರದ ಕಡೆಯಿಂದ ಶ್ರೀಲಂಕಾದ ದಕ್ಷಿಣ ಕಡೆಯಿಂದ ಮುಂಗಾರು ಮಾರುತದ ರೀತಿ ಚಲನೆ ಆರಂಭವಾಗಿದೆ. ಪರಿಣಾಮವಾಗಿ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮೋಡಗಳು ಹೆಚ್ಚು ಬರಬಹುದು.ಬಂಗಾಳಕೊಲ್ಲಿಯ ಅಂಡಮಾನ್ ನಿಕೊಬಾರ್ ಸಮೀಪ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳೂ ಇದೆ. ಇನ್ನೆರಡು ದಿನಗಳಲ್ಲಿ ಸ್ಪಷ್ಟತೆ ಲಭ್ಯವಾಗಬಹುದು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.