06.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಮಂಡ್ಯ, ರಾಮನಗರ, ಬೆಂಗಳೂರು, ಚಾಮರಾಜನಗರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಪುತ್ತೂರು, ಧರ್ಮಸ್ಥಳ, ಕಾರ್ಕಳ ಉಡುಪಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದ. ಕ., ಕಾಸರಗೋಡು, ಉಡುಪಿ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆ ಸಾಧ್ಯತೆ ಇದೆ.
ಉತ್ತರ ಕನ್ನಡ ಒಂದೆರಡು ಭಾಗಗಳಲ್ಲಿ, ದಾವಣಗೆರೆ ಒಂದೆರಡು ಕಡೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. ಕೆಲವು ಕಡೆ ಮಳೆ ಜಾಸ್ತಿ ಇರಬಹುದು.
ಚಂಡಮಾರುತ : ಮತ್ತೆ ಮತ್ತೆ ಪಥ ಬದಲಿಸುತ್ತಿರುವ ಬಂಗಾಳಕೊಲ್ಲಿಯ ಚಂಡಮಾರುತ.
ಬಂಗಾಳಕೊಲ್ಲಿಗೆ ನೇರವಾಗಿ ದಕ್ಷಿಣಕ್ಕೆ ಹಿಂದೂಮಹಾಸಾಗರದಲ್ಲಿ ಭೂಮಧ್ಯ ರೇಖೆಗಿಂತ ಕೆಳಗೆ ಪ್ರಬಲವಾದ ಚಂಡಮಾರುತ ಇರುವುದರಿಂದ ಅದರ ಪ್ರಭಾವದಿಂದ ಬಂಗಾಳಕೊಲ್ಲಿಯ ಚಂಡಮಾರುತವು ಅಷ್ಟೇನು ಪ್ರಬಲವಾಗದಿದ್ದರೂ ಮೇ 8 ರಿಂದ ಸ್ವಲ್ಪ ತೀವ್ರ ಸ್ವರೂಪ ಪಡೆದು ಈಗಿನ ಪಥದಂತೆ ಮೇ 10 ರಂದು ಆಂದ್ರ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…