08.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಒಂದೆರಡು ಕಡೆ ಸಾಧಾರಣ ಮಳೆ ಇರಬಹುದು.ಉಳಿದ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಶಿವಮೊಗ್ಗ ಒಂದೆರಡು ಕಡೆ, ಚಿಕ್ಕಮಗಳೂರು, ಹಾಸನ, ಮೈಸೂರು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಚಂಡಮಾರುತ : ಈಗಿನ ಪಥದಂತೆ ಬಂಗಾಳಕೊಲ್ಲಿಯ ಚಂಡಮಾರುತವು ಮೇ 11 ರಂದು ಆಂಧ್ರಪ್ರದೇಶದ ವಿಶಾಖಪಟ್ಟಣ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಆದರೂ ಶಿಥಿಲಗೊಳ್ಳದೆ ಒರಿಸ್ಸಾ ಕರಾವಳಿ ಮೂಲಕ ಪಶ್ಚಿಮ ಬಂಗಾಳ, ಬಾಂಗ್ಲಾದೇಶದ ಕರಾವಳಿಯ ತನಕ ಸಾಗುವ ಸಾಧ್ಯತೆ ಇದೆ. ಇದರ ಪ್ರಭಾವದಿಂದ ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಮುಂಗಾರು ರೀತಿಯ ಗಾಳಿಯ ಚಲನೆ ಇರುವುದರಿಂದ ಮೇ 10 ರ ನಂತರ ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿ ಭಾಗಗಳಲ್ಲಿ ಮುಂಗಾರು ರೀತಿಯ ಮೋಡಗಳು ಏಳಬಹುದು ಹಾಗೂ ಅಲ್ಲಲ್ಲಿ ಮುಂಗಾರು ರೀತಿಯ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.