09.05. 22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಚಂಡಮಾರುತವು ನಿರೀಕ್ಷೆಗಿಂತ ಪ್ರಭಲವಾಗುತ್ತಿದೆ. ಈಗಿನ ಪಥದಂತೆ ಮೇ 10 ರಂದು ಆಂದ್ರಾದ ವಿಶಾಖಪಟ್ಟಣ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಆದರೂ ಶಿಥಿಲಗೊಳ್ಳದೆ ಮೇ 16ರಂದು ಈಶಾನ್ಯ ರಾಜ್ಯಗಳತ್ತ ನುಗ್ಗವ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಚಂಡಮಾರುತದ ಪ್ರಭಾವದಿಂದ ಇವತ್ತು ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನ ಪ್ರಕಾರ ಚಂಡಮಾರುತವು ಈಶಾನ್ಯ ರಾಜ್ಯಗಳತ್ತ ತಲಪುತ್ತಿದ್ದಂತೆಯೇ ಇತ್ತ ಪಶ್ಚಿಮ ಕರಾವಳಿಯ ಭಾಗಗಳಲ್ಲಿ ( ಮಹಾರಾಷ್ಟ್ರ, ಗೋವಾ, ಕರ್ನಾಟಕ ಹಾಗೂ ಕೇರಳ ಕರಾವಳಿ) ಮುಂಗಾರು ಮಳೆ ವಾತಾವರಣದ ಉಂಟಾಗುವ ಸಾಧ್ಯತೆ ಇದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…