12.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಅಸನಿ ಚಂಡಮಾರುತವು ಆಂದ್ರಾದ ಮಚಲೀಪಟ್ಟಣಕ್ಕೆ ಅಪ್ಪಳಿಸಿ ಶಿಥಿಲಗೊಳ್ಳುತ್ತಿದ್ದು ಪರಿಣಾಮವಾಗಿ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ (ಸುಳ್ಯ, ಸುಬ್ರಹ್ಮಣ್ಯ, ಉಪ್ಪಿನಂಗಡಿ ಸುತ್ತಮುತ್ತ ಸ್ವಲ್ಪ ಮಳೆ ಕಡಿಮೆ ಇರಬಹುದು) ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮುಂಗಾರು ರೀತಿಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಮುಂಗಾರು : ಚಂಡಮಾರುತದ ಪ್ರಭಾವದಿಂದ ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಮುಂಗಾರು ರೀತಿಯ ವಾತಾವರಣ ಉಂಟಾಗಿದೆ. ಗಾಳಿಯ ಈಗಿನ ಈ ಚಲನೆಯು ಸ್ವಲ್ಪ ಮಟ್ಟಿಗೆ ದುರ್ಬಲವಾಗಿದ್ದರೂ ಈಗಿನ ಪ್ರಕಾರ ಮೇ 16 ರಿಂದ ಸ್ವಲ್ಪ ಪ್ರಭಲವಾಗುವ ಸಾಧ್ಯತೆ ಇದೆ. ಕರಾವಳಿ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಆಗಬಹುದು.
ವಿಟ್ಲದ ಐಸಿಎಆರ್–ಸಿಪಿಸಿಆರ್‌ಐ ಕಾರ್ಯಾಗಾರದಲ್ಲಿ ಡಾ. ಹಿಮಾ ಜಾನ್ ಅವರು ಅಡಿಕೆಯ ತೇವಾಂಶ, ವಾಟರ್…
2026-27ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ನೇಮಕಾತಿಗೆ ಆನ್‌ಲೈನ್ ಅರ್ಜಿ…
ಮಂಗಳೂರು ಫೋರ್ಸ್‌ನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 31ರಂದು ಪಡೀಲ್‌ನ ಜಿಲ್ಲಾ ಉದ್ಯೋಗ…
ARDF ಸಭೆಯಲ್ಲಿ ಈ ವರ್ಷ ಡಿಆರ್‌ಐ ಮತ್ತು ಸುಂಕ ಇಲಾಖೆಯಿಂದ 34 ಅಡಿಕೆ…
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಕಲಬುರ್ಗಿ, ಬೀದರ್ ಮತ್ತು ಯಾದಗಿರಿಯಲ್ಲಿ…
ಅಡಿಕೆಯ ಆರೋಗ್ಯ ಸಂಬಂಧಿತ ಸಾಧ್ಯತೆಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ಹೆಚ್ಚಿನ ಸಂಶೋಧನೆ ಅಗತ್ಯವಿದೆ…