16.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ.
ವಿಶೇಷ ವರದಿ : ಈಗನ ಮುನ್ಸೂಚೆನೆಯಂತೆ ಇವತ್ತು ಕೇರಳ ರಾಜ್ಯದಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಮಧ್ಯ ಕೇರಳ ರೆಡ್ ಅಲರ್ಟ್ ಇದೆ.
ನಾಳೆ ಅಂದರೆ ಮೇ 16ರಿಂದ 19ನೇ ತಾರೀಕಿನ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಮತ್ತು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೇ 20 ಹಾಗೂ 21 ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಕೃಷಿಕ, ಹವಾಮಾನ ಆಸಕ್ತ
Be the first to comment on "ವೆದರ್ ಮಿರರ್ |15-05-2022 | ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ| ಮೇ 16ರಿಂದ ಭಾರೀ ಮಳೆ ನಿರೀಕ್ಷೆ | ಕೇರಳದಲ್ಲಿ ರೆಡ್ ಅಲರ್ಟ್"