18.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಮಧ್ಯ ಕೇರಳ ಕಡಲ ತೀರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾದ ಕಾರಣ ಕೇರಳದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ದಕ್ಷಿಣ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಬೆಂಗಳೂರು, ರಾಮನಗರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢ ಸಹ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಈ ವಾತಾವರಣವು ಮೇ 19ರ ತನಕ ಇರಲಿದ್ದು ಆಮೇಲೆ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮಳೆ ಕಡಿಮೆ ಆಗುವ ಮುನ್ಸೂಚನೆ ಇದೆ. ಈಗಿನ ಈ ವಿದ್ಯಮಾನದಿಂದ ಮತ್ತೆ ಮುಂಗಾರು ಆರಂಭವಾಗುವ ಸಮಯ ವ್ಯತ್ಯಾಸವಾಗುವ ಸಾಧ್ಯತೆ ಹೆಚ್ಚಿದೆ.
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…
ನಾಡಿನ ಸಮಸ್ತರಿಗೂ ಮಕರ ಸಂಕ್ರಾಂತಿ ಶುಭಾಶಯ. ರೈತರಿಗೂ ಇದು ಸುಗ್ಗಿಯ ಹಬ್ಬ. ಈ…
ಕರಾವಳಿ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿಯ ತನಕವೂ ಪಶ್ಚಿಮದ ಗಾಳಿಯ ಪ್ರಭಾವ ಇರುವುದರಿಂದ…